HomeKarnatakaBREAKING NEWS: ಸಿಡಿಲು ಬಡಿದು ಮಹಿಳೆ ಹಾಗೂ 20ಕ್ಕೂ ಹೆಚ್ಚು ಮೇಕೆಗಳು ಸಾವು

BREAKING NEWS: ಸಿಡಿಲು ಬಡಿದು ಮಹಿಳೆ ಹಾಗೂ 20ಕ್ಕೂ ಹೆಚ್ಚು ಮೇಕೆಗಳು ಸಾವು

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಮಹಿಳೆಯೋರ್ವರು ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಹೊಸಕೋಟೆಯ ಗಣಗಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮಹಿಳೆಯ ಜೊತೆ 20ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿವೆ.

ಬಿರುಗಾಳಿ, ಮಳೆಯಾಗುತ್ತಿದ್ದಂತೆ ಮಹಿಳೆ ಹಾಗೂ ಮೇಕೆಗಳು ಮರದ ಕೆಳಗೆ ನಿಂತುಕೊಂಡಿದ್ದರು. ಏಕಾಏಕಿ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮಹಿಳೆ ಹಾಗೂ 20ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular