
ಕಾರವಾರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವುಕಂಡಿದ್ದು, 49 ಪ್ರಯಾಣಿಕರಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ತುಮಕೂರಿನ ಲೋಕೇಶ್(26), ಚಿಕ್ಕಬಳ್ಳಾಪುರದ ರುದ್ರೇಶ್(38) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಗೌರಿಬಿದನೂರಿನ ನಿವಾಸಿ ರಜನಿ ಎಂಬುವರ ಕೈ ಕಟ್ ಆಗಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಬಸ್ ನಲ್ಲಿದ್ದ ಉಳಿದ ಪ್ರಯಾಣಿಕರು ಪಾರಾಗಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ, ಹೊನ್ನಾವರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೌರಿಬಿದನೂರಿನಿಂದ ಧರ್ಮಸ್ಥಳಕ್ಕೆ 53 ಪ್ರಯಾಣಿಕರು ತೆರಳುತ್ತಿದ್ದರು. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
		 
		 
		 
		 Loading ...
 Loading ... 
		 
		 
		