ಬೆಂಗಳೂರು: ಜೂನ್ ನಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ. ಕಳೆದ ಒಂದುವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರು ಚಾಲನೆ ನೀಡಲು ತೀರ್ಮಾನಿಸಲಾಗಿದೆ.
ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸುವ ಪೋರ್ಟಲ್ ಸುಮಾರು ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದು, ಜೂನ್ 4ರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಜೂನ್ ಮೊದಲ ವಾರ ವೆಬ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎನ್ನಲಾಗಿದೆ.
ಲಕ್ಷಾಂತರ ಮಂದಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಗೃಹಲಕ್ಷ್ಮಿ, ಗೃಹಜ್ಯೋತಿ ಮೊದಲಾದ ಯೋಜನೆಗಳ ಲಾಭ ಪಡೆಯಲು ಪಡಿತರ ಚೀಟಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಕಾಯುತ್ತಿರುವ ಲಕ್ಷಾಂತರ ಮಂದಿಗೆ ಜೂನ್ ಮೊದಲ ವಾರ ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.