HomeKarnatakaಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ಚುರುಕುಗೊಳಿಸಿದ ಎಸ್ಐಟಿ: ಸಂತ್ರಸ್ತರೊಂದಿಗೆ ಇಂದು ಸ್ಥಳ ಮಹಜರು ಸಾಧ್ಯತೆ

ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ಚುರುಕುಗೊಳಿಸಿದ ಎಸ್ಐಟಿ: ಸಂತ್ರಸ್ತರೊಂದಿಗೆ ಇಂದು ಸ್ಥಳ ಮಹಜರು ಸಾಧ್ಯತೆ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇಂದು ಸಂತ್ರಸ್ತರ ಜೊತೆ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ.

ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ. ರೇವಣ್ಣ ವಿರುದ್ಧ 2 ಕೇಸುಗಳು ದಾಖಲಾಗಿವೆ. ಪ್ರಜ್ವಲ್ ವಿರುದ್ಧ ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪದಡಿ, ರೇವಣ್ಣ ಅವರ ವಿರುದ್ಧ ಲೈಂಗಿಕ ಕಿರುಕುಳ, ಅಪಹರಣ ಆರೋಪದಡಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿದ ಸಂತ್ರಸ್ತೆಯರು ಸೆಕ್ಷನ್ 164ರ ಅಡಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸ್ಥಳ ಮಹಜರು ನಡೆಯುವ ಸಾಧ್ಯತೆ ಇದೆ. ಲೈಂಗಿಕ ಕಿರುಕುಳ ಆರೋಪದಲ್ಲಿ ಹೆಚ್.ಡಿ. ರೇವಣ್ಣ ನಿವಾಸ, ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಮನೆಯಲ್ಲಿ ಮಹಜರು ನಡೆಯುವ ಸಾಧ್ಯತೆ ಇದೆ. ವಿಡಿಯೋದಲ್ಲಿನ ದೃಶ್ಯಗಳನ್ನು ಆಧರಿಸಿ ಸ್ಥಳ ಮಹಜರು ಮಾಡಲಾಗುವುದು. ನಿನ್ನೆ ಹಾಸನ ಜಿಲ್ಲೆಯ ಮೂರು ಕಡೆ ಭೇಟಿ ನೀಡಿ ಎಸ್ಐಟಿ ಪರಿಶೀಲನೆ ನಡೆಸಿದ್ದು, ಇಂದು ಸಂತ್ರಸ್ತರ ಸಮ್ಮುಖದಲ್ಲಿ ಮಹಜರು ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular