ಹಾಸನ: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೂ ಎಸ್ ಐಟಿ ನೋಟೀಸ್ ನೀಡಿದೆ.
ಮೈಸೂರು ಜಿಲ್ಲೆ ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ನೋಟೀಸ್ ನೀಡಲಾಗಿದೆ. ’
ಸಂತ್ರಸ್ತೆ ಕಿಡ್ನ್ಯಾಪ್ ಮಾಡಿರುವ ಆರೋಪದಲ್ಲಿ ಕೆ.ಆರ್.ನಗರದಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಇದೇ ಕೇಸ್ ಸಂಬಂಧ ಎಸ್ ಪಿ ಸೀಮಾ ಲಾಟ್ಕರ್ ನೇತೃತ್ವದಲ್ಲಿ 40ಕ್ಕೂ ಹೆಚ್ಚು ಕಡೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಇದೀಗ ಭವಾನಿ ರೇವಣ್ಣಗೆ ನೋಟೀಸ್ ನೀಡಲಾಗಿದ್ದು, ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.