ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲ್ಯೂ ಕಾರ್ನರ್ ನೋಟಿಸ್ ನೀಡಲು ಎಸ್ ಐಟಿ ಸಿಬಿಐ ಗೆ ಮನವಿ ಮಾಡಿದೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ, ಎಸ್ಐಟಿ ಎರಡು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗಿಲ್ಲ. ಅಲ್ಲದೇ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರೂ ಈವರೆಗೂ ಪಾಸ್ ಪೂರ್ಟ್ ಕೂಡ ರದ್ದುಮಾಡಿಲ್ಲ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಬಳಿ ರಾಜತಾಂತ್ರಿಕ ಪಾಸ್ ಪೋರ್ಟ್ ಇರುವುದರಿಂದ ಆತ ಬೇರೆ ಬೇರೆ ದೇಶಗಳಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬ್ಲ್ಯೂಕಾರ್ನರ್ ನೋಟಿಸ್ ಜಾರಿಗೆ ಎಸ್ ಐಟಿ ಮನವಿ ಮಾಡಿದೆ.
ಬ್ಲ್ಯೂ ಕಾರ್ನರ್ ನೋಟಿಸ್ ಮೂಲಕ ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದಾನೆ? ಆತನ ಚಲನವಲನಗಳೇನು? ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಎಸ್ ಐಟಿ ಮುಂದಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತಂದಿದೆ. ಅಲ್ಲದೇ ಎಸ್ ಐಟಿ, ಸಿಬಿಐ ಗೆ ಮನವಿ ಮಾಡಿ ಇಂತರ್ ಪೋಲ್ ಮೂಲಕ ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಮನವಿ ಮಾಡಿದೆ.