HomeKarnatakaಮೇ 7ರ ಬಳಿಕ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂದ ಮಾಜಿ...

ಮೇ 7ರ ಬಳಿಕ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂದ ಮಾಜಿ ಸಿಎಂ

ಕಲಬುರ್ಗಿ: ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಯಾಕೆ ಮಾತನಾಡಬೇಕು? ಪ್ರಜ್ವಲ್ ನಮ್ಮ ಕುಟುಂಬಕ್ಕೆ ಸೇರಿದವನು ಆತನ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್ ಬಗ್ಗೆ ಈಗ್ಯಾಕೆ ಬಿಜೆಪಿ ನಾಯಕರು ಮಾತನಾಡುತ್ತಿಲ್ಲ? ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆಗೆ ಕಿಡಿಕಾರಿದ ಕುಮಾರಸ್ವಾಮಿ, ಬಿಜೆಪಿಯವರು ಯಾಕೆ ಮಾತನಾಡಬೇಕು? ಪ್ರಜ್ವಲ್ ನಮ್ಮ ಕುಟುಂಬದವನು ಬಿಜೆಪಿಯವರೇಕೆ ಮಾತನಾಡುತ್ತಾರೆ? ಎಂದು ಕೇಳಿದರು.

ಮೇ 7ರ ಬಳಿಕ ಈ ಪ್ರಕರಣ ಎಲ್ಲಿಗೆ ಹೋಗುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಕಾಂಗ್ರೆಸ್ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಹೆಚ್.ಡಿ.ಕೆ ಗಂಟೆಗೊಂದು ಮಾತು ಬದಲಿಸುತ್ತಿದ್ದಾರೆ. ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂಬ ಡಿಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೌದು ನಾನು ಮಾನಸಿಕ ಸ್ಥಿತಿ ಕಳೆದುಕೊಂಡಿರುವುದಕ್ಕೆ ಹೀಗೆ ಮಾತನಾಡುತ್ತಿರುವುದು ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

Most Popular