HomeKarnatakaಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚುತ್ತಿದ್ದ ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಿಜೆಪಿ ಕಾರ್ಯಕರ್ತರು: 20...

ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚುತ್ತಿದ್ದ ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಿಜೆಪಿ ಕಾರ್ಯಕರ್ತರು: 20 ಲಕ್ಷ ರೂ. ವಶಕ್ಕೆ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡುತ್ತಿದ್ದ ಆರೋಪದ ಮೇಲೆ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಐವರನ್ನು ಹಿಡಿದ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಂಕಲಗಿ ಗ್ರಾಮದ ಮನೆ ಮನೆಗೆ ತೆರಳಿ ಒಂದು ಸಾವಿರ ರೂಪಾಯಿ ಹಂಚುತ್ತಿದ್ದ ವೇಳೆ ಹಣದ ಸಮೇತ ನಾಲ್ವರು ಬೆಂಬಲಿಗರು ಸಿಕ್ಕಿ ಬಿದ್ದಿದ್ದಾರೆ. ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಬರುತ್ತಿದ್ದಂತೆ ಹಣ ಹಂಚುತ್ತಿದ್ದವರು ಪರಾರಿಯಾಗಲು ಯತ್ನಿಸಿದ್ದಾರೆ. ನಂತರ ಸಿನಿಮೀಯ ರೀತಿಯಲ್ಲಿ ಅವರನ್ನು ಹಿಡಿದು ಮತದಾರರಿಗೆ ಹಂಚಲು ತಂದಿದ್ದ 20 ಲಕ್ಷ ರೂಪಾಯಿ ಹಣ ಮತ್ತು ಐವರನ್ನು ಹಿಡಿದು ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾಂತೇಶ ಕಡಾಡಿ. ಭದ್ರಾವತಿ ಮೂಲದ ಇಬ್ಬರು ಯುವಕರು, ಹರ್ಷ ಶುಗರ್ಸ್ ಕಾರ್ಖಾನೆಯ ಇಬ್ಬರು ಸಿಬ್ಬಂದಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular