HomeKarnatakaಅಶ್ಲೀಲ ವಿಡಿಯೋ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣ ಇಂದು ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿಯುವ...

ಅಶ್ಲೀಲ ವಿಡಿಯೋ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣ ಇಂದು ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿಯುವ ಸಾಧ್ಯತೆ

ಮಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣನನ್ನು ವಾಪಾಸ್ ಕರೆತರಲು ಎಸ್ ಐಟಿ ಪ್ರಯತ್ನ ನಡೆಸಿದೆ. ಈಗಾಗಲೇ ಪ್ರಕರಣದಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಬಂಧನವಾಗಿದ್ದು, ಪ್ರಜ್ವಲ್ ಬಂಧನಕ್ಕೂ ಬಲೆಬೀಸಲಾಗಿದೆ.

ಈ ನಡುವೆ ಪ್ರಜ್ವಲ್ ರೇವಣ್ಣ ಇಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಾಧ್ಯತೆ ಇದೆ. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಸದ್ಯ ಲುಕ್ ಔಟ್ ನೋಟೀಸ್ ಜಾರಿಮಾಡಲಾಗಿದ್ದು, ಹಾಗಾಗಿ ಏರ್ ಪೋರ್ಟ್ ಗೆ ಬಂದಿಳಿಯುತ್ತಿದ್ದಂತೆ ಪ್ರಜ್ವಲ್ ನನ್ನು ಬಂಧಿಸುವ ಸಾಧ್ಯತೆ ಇದೆ.

ಪ್ರಜ್ವಲ್ ದುಬೈನಲ್ಲಿ ಕೇರಳ ಮೂಲದ ವ್ಯಕ್ತಿಯ ಅಪಾರ್ಟ್ ಮೆಂಟ್ ನಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ದೇಶಕ್ಕೆ ಆಗಮಿಸುವ ನಿರೀಕ್ಷೆ ಇದೆ. ಪ್ರಜ್ವಲ್ ರೇವಣ್ಣ ವಿದೇಶದಿಂದ ಯಾವುದೇ ಏರ್ ಪೋರ್ಟ್ ಗೆ ಬಂದಿಳಿದರೂ ಬೆಂಗಳೂರು, ಮಂಗಳೂರು, ಗೋವಾ, ಕೊಚ್ಚಿ, ಮುಂಬೈ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದಿಳಿದರೂ ಅಲ್ಲಿಯೇ ಬಂಧಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular