ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಇನ್ನು 2-3 ದಿನಗಳಲ್ಲಿ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ ಆಗಲಿದೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಈ ಬಾರಿ ಬರಗಾಲ ನೀಗಿಸಲು ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರೂ ಸ್ಪಂದಿಸಲಿಲ್ಲ. ನ್ಯಾಯಕ್ಕಾಗಿ ಕೋರ್ಟ್ ಮೊರೆ ಹೋದಾಗ ದಾಖಲೆ ಪರಿಶೀಲಿಸಿ ಕೂಡಲೇ ಪರಿಹಾರ ನೀಡಲು ಮೋದಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಇದರ ಪರಿಣಾಮ ಕೇಂದ್ರದಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು, ರಾಜ್ಯ ಸರ್ಕಾರದಿಂದ ಇನ್ನು 2-3 ದಿನಗಳಲ್ಲಿ ಎಲ್ಲಾ ಅರ್ಹ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.