ಬೆಂಗಳೂರು: ವೈದ್ಯಕೀಯ ಕೋರ್ಸ್ ಗಳ ಪ್ರವೇಶಾತಿಗೆ ಭಾನುವಾರ ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ –ನೀಟ್ ಯಶಸ್ವಿಯಾಗಿ ನಡೆದಿದೆ.
ಆದರೆ, ಪಠ್ಯಕ್ರಮ ಹೊರತಾದ ಪ್ರಶ್ನೆ ಕೇಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸಿಇಟಿಯಂತೆ ನೀಟ್ ಪರೀಕ್ಷೆಯಲ್ಲಿಯೂ ಪಠ್ಯಕ್ರಮದಲ್ಲಿ ಇಲ್ಲದ ಪ್ರಶ್ನೆಗಳು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಭೌತಶಾಸ್ತ್ರದಲ್ಲಿ ಒಂದು ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಲಾಗಿದೆ. ಮತ್ತೊಂದು ಪ್ರಶ್ನೆಯನ್ನು ತಪ್ಪಾಗಿ ಕೇಳಲಾಗಿದೆ ಎಂದು ಹೇಳಲಾಗಿದೆ.
ಭೌತಶಾಸ್ತ್ರ ವಿಷಯದಲ್ಲಿ ರೇಡಿಯೋ ಆಕ್ಟಿವಿಟಿ ಸಿಲೆಬಸ್ ಕೈಬಿಟ್ಟಿದ್ದರೂ ಅದರಿಂದ ಒಂದು ಪ್ರಶ್ನೆ ಕೇಳಲಾಗಿದೆ. ಪ್ರಶ್ನೆಯೊಂದನ್ನು ತಪ್ಪಾಗಿ ಕೇಳಲಾಗಿದ್ದು, ಇದರಿಂದ ಗೊಂದಲ ಸೃಷ್ಟಿಯಾಗಿದೆ. ಉಳಿದಂತೆ ರಸಾಯನಶಾಸ್ತ್ರ, ಮತ್ತು ಜೀವಶಾಸ್ತ್ರದಲ್ಲಿ ಯಾವುದೇ ಗೊಂದಲ ಇರಲಿಲ್ಲ. ಭೌತಶಾಸ್ತ್ರ ವಿಷಯದ ಪರೀಕ್ಷೆ ಈ ಬಾರಿ ಸ್ವಲ್ಪ ಕಷ್ಟವಿತ್ತು ಎಂದು ಹೇಳಲಾಗಿದೆ.