HomeKarnatakaBIG NEWS: ಮಹಿಳೆ ಕಿಡ್ನ್ಯಾಪ್ ಪ್ರಕರಣ: ಭವಾನಿ ರೇವಣ್ಣಗೂ ಸಂಕಷ್ಟ

BIG NEWS: ಮಹಿಳೆ ಕಿಡ್ನ್ಯಾಪ್ ಪ್ರಕರಣ: ಭವಾನಿ ರೇವಣ್ಣಗೂ ಸಂಕಷ್ಟ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣರನ್ನು ಎಸ್ಐಟಿ ಬಂಧಿಸಿದ್ದು, ಇದೇ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣ ದಾಖಲಾಗಿದೆ. ತಂದೆ ಹೆಚ್.ಡಿ.ರೇವಣ್ಣ ವಿರುದ್ಧವೂ ಲೈಂಗಿಕದೌರ್ಜನ್ಯ, ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣ ದಾಖಲಾಗಿದೆ. ಮಗ ಹಾಗೂ ಪತಿಯ ಪ್ರಕ್ರಣದಲ್ಲಿ ಭವಾನಿ ರೇವಣ್ಣ ಹೆಸರೂ ಕೇಳಿಬಂದಿದೆ.

ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಕೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಭವಾನಿ ರೇವಣ್ಣ ಅವರೇ ಕರೆದುಕೊಂಡು ಬಾ ಎಂದು ಹೇಳಿದ್ದಾರೆ ಎಂದು ಮಹಿಳೆಯನ್ನು ಅಪಹರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ನಗೆ ತನಿಖಾ ತಂದ ನೋಟೀಸ್ ನೀಡಿ ಮಾಹಿತಿ ಪಡೆದುಕೊಂಡಿದೆ. ತನಿಖೆ ವೇಳೆ ಭವಾನಿ ರೇವಣ್ಣ ವಿರುದ್ಧ ಸಾಕ್ಷ್ಯ ಸಿಕ್ಕರೆ ಅವರು ಕೂಡ ಬಂಧನವಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular