ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನಾಳೆ ಮತದಾನಕ್ಕೆ ಅವಕಾಶ ದೊರೆತಿಲ್ಲ. ಅವರು ಲೋಕಸಭೆ ಚುನಾವನೆಯಲ್ಲಿ ಮತದಾನಕ್ಕೆ ಅವಕಾಶ ಕೋರಿದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಧಾರವಾಡ ಬಿಜೆಪಿ ಮುಖಂಡರಾಗಿದ್ದ ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಕ್ಷೇತ್ರದಿಂದ ಹೊರಗಿದ್ದಾರೆ. ಅವರಿಗೆ ಕ್ಷೇತ್ರದಲ್ಲಿ ಮತದಾನಕ್ಕೆ ಅವಕಾಶ ನಿರಾಕರಿಸಲಾಗಿದೆ.