HomeKarnatakaರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೇಶದಲ್ಲಿ ಮೂರನೇ ಹಂತದ ಚುನಾವಣೆ ಇದಾಗಿದೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವವರೆಗೆ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಸುಗಮವಾಗಿ ಚುನಾವಣೆ ನಡೆಸಲು ಆಯೋಗದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೆಳಗಾವಿ, ಚಿಕ್ಕೋಡಿ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

29269 ಮತಗಟ್ಟೆಗಳನ್ನು ತೆರೆಯಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೇರಿ 14 ಕ್ಷೇತ್ರಗಳಲ್ಲಿ 206 ಪುರುಷರು 21 ಮಹಿಳೆಯರು ಸೇರಿ 227 ಮಂದಿ ಕಣದಲ್ಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular