HomeKarnatakaಇಂದು H.D. ರೇವಣ್ಣ ಕಸ್ಟಡಿ ಅಂತ್ಯ; ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್ಐಟಿ

ಇಂದು H.D. ರೇವಣ್ಣ ಕಸ್ಟಡಿ ಅಂತ್ಯ; ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್ಐಟಿ

ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿರುವ ಹಾಗೂ ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ತಂಡದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ.

ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದು, ಹೆಚ್ಚಿನ ವಿಚಾರಣೆಗಾಗಿ ಇನ್ನಷ್ಟು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಲಿದ್ದಾರಾ ಎಂಬ ಕುತೂಹಲ ಮನೆ ಮಾಡಿದೆ.

ಇದರ ಮಧ್ಯೆ ಎಸ್ಐಟಿ ತಂಡದ ತನಿಖಾ ವೈಖರಿಗೆ ಜಾತ್ಯಾತೀತ ಜನತಾದಳ ನಾಯಕರಿಂದ ಅಸಮಾಧಾನ ವ್ಯಕ್ತವಾಗಿದ್ದು, ಹೀಗಾಗಿ ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಇಂದು ಜೆಡಿಎಸ್ ಕಾರ್ಯಕರ್ತರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular