HomeKarnatakaರೌಡಿಶೀಟರ್ ಕೊಲೆ ಮಾಡಿದ್ದ 9 ಮಂದಿಗೆ ಜೀವಾವಧಿ ಶಿಕ್ಷೆ

ರೌಡಿಶೀಟರ್ ಕೊಲೆ ಮಾಡಿದ್ದ 9 ಮಂದಿಗೆ ಜೀವಾವಧಿ ಶಿಕ್ಷೆ

ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಲೆ ಮಾಡಿದ್ದ 9 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿದಂತೆ 9 ಮಂದಿಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹೆಚ್ಚುವರಿ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಕೊಲೆ ನಡೆದ 10 ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಿದ ಕೋರ್ಟ್ ತೀರ್ಪು ಪ್ರಕಟಿಸಿದೆ. ಕಲಬುರಗಿ ಜೈಲಿನಲ್ಲಿದ್ದ ಯಾಚೇನಹಳ್ಳಿ ಚೇತು ಕೊಲೆ ಮಾಡಿಸಿದ್ದ. ಮಂಡ್ಯ ಶಿವು ಅಲಿಯಾಸ್ ಶಿವಕುಮಾರ್, ಉಲಿವಾಲ ಚೇತು, ರಾಕಿ ಸೇರಿದಂತೆ 9 ಅಪರಾಧಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮತ್ತಿಬ್ಬರು ಅಪರಾಧಿಗಳಿಗೆ ತಲಾ 2.5 ವರ್ಷ ಶಿಕ್ಷೆ ವಿಧಿಸಿದೆ. ಇನ್ಸ್ ಪೆಕ್ಟರ್ ಕೆ.ಎಂ. ವಸಂತ್ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚನ್ನರಾಯಪಟ್ಟಣ ಟೌನ್ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular