ಉಡುಪಿ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿ ನಡೆದಿದೆ.
ಗಾಯಾಳು ಮಹಿಳೆಯರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಮ್ಮಂಜೆ ಪ್ರದೇಶದಲ್ಲಿ ಮೂರು ಪ್ರತ್ಯೇಕ ಕಟ್ಟದಗಳಲ್ಲಿ ಕಳೆದ ಕೆಲ ವರ್ಷಗಳಿಂದ ಸಿಡಿಮದ್ದು ತಯಾರಿಸಲಾಗುತ್ತಿತ್ತು. ಒಂದು ಕಟ್ಟಡದಲ್ಲಿ ಒಂದು ಆಕಸ್ಮಿಕ ಸ್ಫೋಟ ಸಂಭವಿಸಿದೆ.
ಘಟಕದಲ್ಲಿದ್ದ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದೆ. ಕಾರ್ಕಳ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.