HomeKarnatakaBIG BREAKING: ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

BIG BREAKING: ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದಿದ್ದು, ಬಳಿಕ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಬಿ ಕಟ್ಟಿಮನಿ ನೇತೃತ್ವದಲ್ಲಿ ವಿಚಾರಣೆ ನಡೆದಿದ್ದು ಈ ಸಂದರ್ಭದಲ್ಲಿ ಎಸ್ಐಟಿ ಪರ ವಕೀಲ ಜಗದೀಶ್, ಆರೋಪಿ ವಿಚಾರಣೆಗೆ ಸಹಕರಿಸುತ್ತಿಲ್ಲ, ಹೀಗಾಗಿ ಮತ್ತಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಮಾಡಿದ್ದರು.

ಇದಕ್ಕೆ ರೇವಣ್ಣ ಪರ ವಕೀಲ ಸಿ.ವಿ. ನಾಗೇಶ್ ಆಕ್ಷೇಪ ವ್ಯಕ್ತಪಡಿಸಿದ್ದು, ಪರ – ವಿರೋಧದ ವಾದವನ್ನು ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ವಿಚಾರಣೆಯನ್ನು ನಾಳೆ ಬೆಳಗ್ಗೆ 12 – 45 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular