ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023 -24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಲಿದೆ.
ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 4,41,910 ವಿದ್ಯಾರ್ಥಿಗಳು, 4,28,058 ವಿದ್ಯಾರ್ಥಿನಿಯರು ಸೇರಿ 8,69,968 ವಿದ್ಯಾರ್ಥಿಗಳ ಭವಿಷ್ಯ ಪ್ರಕಟವಾಗಲಿದೆ.
ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಮೇ 9ರಂದು ಬೆಳಿಗ್ಗೆ ಫಲಿತಾಂಶ ಪ್ರಕಟಿಸಲಾಗುವುದು. ಇಂದು ಬೆಳಗ್ಗೆ 10.30 ರ ನಂತರ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in, kseeb.kar.nic.in, ವೆಬ್ಸೈಟ್ ನಲ್ಲಿ ವೀಕ್ಷಿಸಬಹುದು.
ಪ್ರಸಕ್ತ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ -1, ಪರೀಕ್ಷೆ -2 ಮತ್ತು ಪರೀಕ್ಷೆ -3 ನಡೆಸಲಾಗುವುದು. ಇಂದು ಪರೀಕ್ಷೆ -1ರ ಫಲಿತಾಂಶ ಪ್ರಕಟಿಸಲಾಗುತ್ತದೆ.