HomeKarnatakaಕೆಪಿಸಿಎಲ್ - KSFC ನೇಮಕಾತಿಯ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೆಪಿಸಿಎಲ್ – KSFC ನೇಮಕಾತಿಯ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (ಕೆ ಎಸ್ ಎಫ್ ಸಿ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ನೇಮಕಾತಿ ಲಿಖಿತ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಪಡೆದ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪ್ರತಿ ತಪ್ಪು ಉತ್ತರಕ್ಕೆ 1/3 ರಷ್ಟು ನಕರಾತ್ಮಕ ಅಂಕ ಕಡಿತ ಮಾಡಲಾಗಿದೆ. ಈ ಕುರಿತು ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಮೇ 15ರ ಒಳಗೆ ಇ-ಮೇಲ್ [email protected] ಮೂಲಕ ಕಳುಹಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಸಹಾಯಕ ಇಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ 622 ಹುದ್ದೆಗಳು ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ (ಕೆ ಎಸ್ ಎಫ್ ಸಿ) 41 ಹುದ್ದೆಗಳ ನೇಮಕಾತಿಗೆ ಈ ಲಿಖಿತ ಪರೀಕ್ಷೆ ನಡೆದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular