
ಈ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ಎಚ್.ಡಿ. ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್ ನ ಹಾಲಿ ಹಾಗೂ ಮಾಜಿ ಶಾಸಕರು ಸೇರಿದಂತೆ ಹಲವು ನಾಯಕರು ಒತ್ತಾಯಿಸುತ್ತಿದ್ದು, ಇಂದು ಈ ಕುರಿತಂತೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬಹುತೇಕ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಈ ಪ್ರಕರಣದಿಂದ ಪಕ್ಷಕ್ಕೆ ಮುಜುಗರವಾಗಿದ್ದು, ಇದನ್ನು ನಿಭಾಯಿಸಬೇಕೆಂದರೆ ಅಮಾನತು ಮಾಡುವಂತಹ ಶಿಸ್ತು ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಹಲವು ನಾಯಕರು ಪ್ರತಿಪಾದಿಸಿದ್ದಾರೆ ಎನ್ನಲಾಗಿದೆ.

