ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಚುರುಕುಗೊಳಿಸಿದ್ದು, ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹಾಗೂ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡಗೆ ನೋಟಿಸ್ ಜಾರಿ ಮಾಡಿದೆ.
ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಇಬ್ಬರಿಗೂ ನೋಟೀಸ್ ನೀಡಿದೆ. ದೇವರಾಜೇಗೌಡ ಕೆಲ ದಿನಗಳ ಹಿಂದೆ ಕೆಲ ದಾಖಲೆಗಳನ್ನು, ಆಡೀಯೋಗಳನ್ನು ಬಿಡುಗಡೆ
ಮಾಡಿದ್ದರು. ಅಲ್ಲದೇ ಡಿಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಎಸ್ಐಟಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗಲು ಸೂಚಿಸಿದೆ.
ಇನ್ನು ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀದಲಾಗಿದೆ.
ಪ್ರಜ್ವಲ್ ರೇವಣ್ಣ ಪ್ರಕರಣ,ದೇವರಾಜೇಗೌಡ,ಕಾರ್ತಿಕ್ ಗೌಡ,ಎಸ್ ಐಟಿ,ನೋಟಿಸ್,Prajwal revanna,devarajegowda,kartik gowda,Notice