HomeKarnatakaBIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್, ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್: ರಾಜ್ಯಪಾಲರಿಗೆ ದೂರು...

BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್, ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ JDS ನಿಯೋಗ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಯಕರ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ನೀಡಿದೆ.

ಪೆನ್ ಡ್ರೈವ್ ಪ್ರಕರಣ ಹಾಗೂ ರೇವಣ್ಣ ವಿರುದ್ಧ ಕಿಡ್ನ್ಯಾಪ್ ಆರೋಪ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು ಹಾಗೂ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular