ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಾ ಕ್ಷೇತ್ರದಲ್ಲಿ ಖ್ಯಾತ ಕೊನಿಡೇಲ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.
ಸಮಾರಂಭದಲ್ಲಿ ಚಿರಂಜೀವಿ ಅವರ ಪತ್ನಿ ಸುರೇಖಾ ಮತ್ತು ಮಗ, ರಾಮ್ ಚರಣ್ ಅವರ ಪತ್ನಿ ಉಪಾಸನಾ ಕೊನಿಡೇಲಾ ಸಹ ಉಪಸ್ಥಿತರಿದ್ದರು.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದ್ದು, ಕಲಾ ಕ್ಷೇತ್ರದಲ್ಲಿ ಹಿರಿಯ ನಟಿ ವೈಜಯಂತಿಮಾಲಾ ಬಾಲಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಮಾಧ್ಯಮದ ಅನುಭವಿ ಹೊರ್ಮುಸ್ಜಿ ಎನ್. ಕಾಮಾ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಾಹಿತ್ಯ ಮತ್ತು ಶಿಕ್ಷಣ – ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಸಾರ್ವಜನಿಕ ವ್ಯವಹಾರಗಳ ಕ್ಷೇತ್ರದಲ್ಲಿ ಸತ್ಯಬ್ರತ ಮುಖರ್ಜಿ(ಮರಣೋತ್ತರ) ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ದಿವಂಗತ ಸತ್ಯಬ್ರತ ಮುಖರ್ಜಿ ಅವರ ಪುತ್ರ ಸುಮೇಂದ್ರ ನಾಥ್ ಮುಖರ್ಜಿ ಪ್ರಶಸ್ತಿ ಸ್ವೀಕರಿಸಿದರು.
ಶಿಲ್ಪಿ ಎ. ವೇಲು ಆನಂದ ಚಾರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಸೋಮ್ ದತ್ ಬಟ್ಟು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು
ಕೃಷಿ ಕ್ಷೇತ್ರದಲ್ಲಿ ಸತ್ಯನಾರಾಯಣ ಬೇಲೇರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ, ಕ್ರೀಡಾ ಕ್ಷೇತ್ರದಲ್ಲಿ ಜೋಷ್ನಾ ಚಿನಪ್ಪ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರೈತ ಕೆ. ಚೆಲ್ಲಮ್ಮಳ್ ಅವರಿಗೆ ಕೃಷಿ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶ್ರೀಧರ್ ಮಾಕಂ ಕೃಷ್ಣಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ.