ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಸಂತ್ರಸ್ತೆಯರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸ್ಐಟಿಯಲ್ಲಿ ದೂರು ದಾಖಲಾಗಿದೆ.
ಸಂತ್ರಸ್ತೆಯರಿಗೆ ಬೆದರಿಕೆ ಹಾಕಿ ತನಿಖೆಯ ದಿಕ್ಕು ತಪ್ಪಿಸುತ್ತಿರುವ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಎಸ್ಐಟಿಗೆ ದೂರು ನೀಡಿದ್ದಾರೆ. ಕುಮಾರಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಲವು ಸಂತ್ರಸ್ತೆಯರಿದ್ದಾರೆ. ಸರ್ಕಾರ ತನಿಖೆಗೆ ಎಸ್ಐಟಿ ರಚಿಸಿದೆ. ಆದರೆ ಮಾಜಿ ಸಿಎಂ ಕುಮಾರಸ್ವಾಮಿ ಸಂತ್ರಸ್ತೆಯರ ಸ್ಥಳವನ್ನು ಬಹಿರಂಗಪಡಿಸುತ್ತಿದ್ದಾರೆ. ಅಲ್ಲದೇ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪರೋಕ್ಷವಾಗಿ ರಕ್ಷಿಸುತ್ತಿದ್ದಾರೆ. ಇದರಿಂದಾಗಿ ಸಂತ್ರಸ್ತೆಯರು ದೂರು ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದೆ.