HomeKarnatakaBIG NEWS: 'ಪೆನ್ ಡ್ರೈವ್' ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ದೇವರಾಜೇ ಗೌಡ ವಿರುದ್ಧ ಬ್ಲಾಕ್ ಮೇಲ್...

BIG NEWS: ‘ಪೆನ್ ಡ್ರೈವ್’ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ದೇವರಾಜೇ ಗೌಡ ವಿರುದ್ಧ ಬ್ಲಾಕ್ ಮೇಲ್ ಆರೋಪ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ | udayavani

ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಸುಳ್ಳು ದೂರು ನೀಡಲು ತಮಗೆ ಪೊಲೀಸರೆಂದು ಹೇಳಿಕೊಂಡ ಕೆಲವರು ಬೆದರಿಸಿದ್ದಾರೆಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ದೂರು ನೀಡಿದ್ದ ಬೆನ್ನಲ್ಲೇ ಈಗ ಮತ್ತೊಂದು ಆರೋಪ ಕೇಳಿ ಬಂದಿದೆ.

ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ ಅವರಿಂದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಪಡೆದುಕೊಂಡಿದ್ದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇ ಗೌಡ ವಿರುದ್ಧ ಸಂತ್ರಸ್ತ ಮಹಿಳೆಯೊಬ್ಬರು, ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದು ಈಗ ಬಹಿರಂಗವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತ್ರಸ್ತ ಮಹಿಳೆಗೆ ವಿಡಿಯೋ ಕಾಲ್ ಮಾಡುತ್ತಿದ್ದ ದೇವರಾಜೇಗೌಡ, ನನ್ನೊಂದಿಗೆ ಸಹಕರಿಸದಿದ್ದರೆ ತಮ್ಮ ಬಳಿ ಇರುವ ವಿಡಿಯೋ ಬಹಿರಂಗಗೊಳಿಸುವುದಾಗಿ ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ. ಅಲ್ಲದೆ ಸಂತ್ರಸ್ತ ಮಹಿಳೆ ಮಾಧ್ಯಮ ಸಂದರ್ಶನದಲ್ಲೂ ಕೂಡ ತಮ್ಮ ಆರೋಪಗಳನ್ನು ಪುನರುಚ್ಚರಿಸಿದ್ದು, ಜೀವ ಬೆದರಿಕೆಯನ್ನೂ ಸಹ ದೇವರಾಜೇಗೌಡ ಹಾಕಿದ್ದಾರೆಂದು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular