HomeCrimeBIG BREAKING: ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಆತ್ಮಹತ್ಯೆಗೆ ಶರಣು

BIG BREAKING: ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಆತ್ಮಹತ್ಯೆಗೆ ಶರಣು

ಗುರುವಾರ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿ ಮೀನಾ ಎಂಬಾಕೆಯನ್ನು ಪ್ರಕಾಶ್ ಎಂಬ ಯುವಕ ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೊರ್ಲಬ್ಬಿ ಗ್ರಾಮದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿ, ಬಾಲಕಿಯ ರುಂಡ ಕಡಿದು ಭೀಕರವಾಗಿ ಹತ್ಯೆ ಮಾಡಿದ್ದ. ಅಲ್ಲದೆ ಆಕೆಯ ರುಂಡವನ್ನು ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದ.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರ ನಡುವೆ ಇದೀಗ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ತನ್ನ ಮನೆ ಸಮೀಪದಲ್ಲಿ ನೇಣು ಬಿಗಿದುಕೊಂಡು ಪ್ರಕಾಶ್ ಸಾವಿಗೆ ಶರಣಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular