ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಪ್ರಧನ ಕಾರ್ಯದರ್ಶಿ ಮನೋಹರ್, ಮಹಿಳೆಯರಿಗೆ ನ್ಯಾಯ ಕೊಡಿಸುತ್ತೇನೆ ಎಂದು ಅವರೇ ದೌರ್ಜನ್ಯವೆಸಗಿದ್ದಾರೆ. ಕಾನೂನಾತ್ಮಕವಾಗಿ ಹೋರಾಟ ಮಾಡುವವರೇ ದೌರ್ಜನ್ಯವೆಸಗಿದ್ದು, ದೇವರಾಜೇಗೌಡ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ದೇವರಾಜೇಗೌಡ ಬ್ಲ್ಯಾಕ್ ಮೇಲರ್ ಎಂದು ಈಗಗಾಲೇ ಕುಖ್ಯಾತಿ ಪಡೆದಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ ಈಗ ಸರ್ಕಾರದ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ. ಆತನ ನೈಜ ಚಿತ್ರಣ ಹಾಗೂ ಹಿನ್ನೆಲೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.