HomeKarnataka'ಮಳೆ' ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮತ್ತೊಂದು ಮಾಹಿತಿ

‘ಮಳೆ’ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮತ್ತೊಂದು ಮಾಹಿತಿ

ಬಿರುಬಿಸಿಲಿನ ಹೊಡೆತದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ತಂಪೆರದಿದೆ. ಇದರ ಮಧ್ಯೆ ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಮಾಹಿತಿ ಇಲ್ಲಿದೆ.

ರಾಜ್ಯದ ಹಲವು ಭಾಗಗಳಲ್ಲಿ ಇನ್ನೂ ನಾಲ್ಕು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 11ರಂದು ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಮೇ 12ರಂದು ಶಿವಮೊಗ್ಗ, ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು, ಮೇ 13 ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮೈಸೂರು, ಮಂಡ್ಯ ಹಾಗೂ ಮೇ 14ರಂದು ವಿಜಯಪುರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular