HomeIndiaಬಿಜೆಪಿ ಸೋಲು ಉತ್ತರ ಪ್ರದೇಶದಿಂದಲೇ ಆರಂಭವಾಗುತ್ತೆ; ಇದನ್ನು ನಾನು ಬರೆದು ಕೊಡಲು ಸಿದ್ದ ಎಂದ ರಾಹುಲ್

ಬಿಜೆಪಿ ಸೋಲು ಉತ್ತರ ಪ್ರದೇಶದಿಂದಲೇ ಆರಂಭವಾಗುತ್ತೆ; ಇದನ್ನು ನಾನು ಬರೆದು ಕೊಡಲು ಸಿದ್ದ ಎಂದ ರಾಹುಲ್

ಏಳು ಹಂತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಈಗಾಗಲೇ ಹಲವು ಹಂತದ ಮತದಾನ ಪೂರ್ಣಗೊಂಡಿದೆ. ಇನ್ನುಳಿದ ಹಂತದ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪಕ್ಷಗಳ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಬಿಜೆಪಿ ನಾಯಕರು ಪಕ್ಷದ ಅಭ್ಯರ್ಥಿಗಳ ಪ್ರಚಾರ ಕಾರ್ಯ ನಡೆಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಉತ್ತರ ಪ್ರದೇಶದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪತನವಾಗುವುದು ಖಚಿತ. ಇದು ಉತ್ತರ ಪ್ರದೇಶದಿಂದಲೇ ಆರಂಭವಾಗುತ್ತದೆ. ಇದನ್ನು ನಾನು ಬರೆದುಕೊಡಲೂ ಸಿದ್ದ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರದ ಬಿಜೆಪಿ ಸರ್ಕಾರ ಕೆಲವೇ ಕೆಲವು ಸಿರಿವಂತರನ್ನು ಮತ್ತಷ್ಟು ಶ್ರೀಮಂತರನ್ನಾಗಿ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲರನ್ನು ಸಮಾನವಾಗಿ ಕಾಣುತ್ತದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular