HomeKarnatakaದೇವರಾಜೇಗೌಡ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ....!

ದೇವರಾಜೇಗೌಡ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ….!

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಒಳಗೊಂಡ ಸಿಡಿ ತಮ್ಮ ಬಳಿ ಇದೆ ಎಂದು ಹೇಳುವ ಮೂಲಕ ಭಾರಿ ಪ್ರಚಾರಕ್ಕೆ ಬಂದಿದ್ದ ವಕೀಲ ದೇವರಾಜೇಗೌಡ ಅವರನ್ನು ಈಗ ಪೊಲೀಸರು ಬಂಧಿಸಿದ್ದಾರೆ.

ಈ ಪೆನ್ ಡ್ರೈವ್ ತೋರಿಸಿ ದೇವರಾಜೇಗೌಡ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಸಂತ್ರಸ್ತ ಮಹಿಳೆಯೊಬ್ಬರು ಹೊಳೆನರಸೀಪುರ ಠಾಣೆಯಲ್ಲಿ ಏಪ್ರಿಲ್ 1 ರಂದು ದಾಖಲಿಸಿದ್ದ ದೂರಿನ ಮೇರೆಗೆ ದೇವರಾಜೇಗೌಡರನ್ನು ಈಗ ಬಂಧಿಸಲಾಗಿದೆ.

ತಮ್ಮನ್ನು ಪೊಲೀಸರು ಬಂಧಿಸಬಹುದು ಎಂಬ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಮೂರ್ನಾಲ್ಕು ಬ್ಯಾಗುಗಳಲ್ಲಿ ಬಟ್ಟೆ ತುಂಬಿಕೊಂಡು ದೇವರಾಜೇಗೌಡ ಎಸ್ಕೇಪ್ ಆಗಲು ಸಿದ್ಧತೆ ನಡೆಸಿದ್ದರೆಂದು ಹೇಳಲಾಗಿದ್ದು, ತಮ್ಮ ಕೆಲ ಆಪ್ತರಿಗೆ ವಾಟ್ಸಾಪ್ ಕಾಲ್ ಮಾಡಿದ್ದರು. ದೇವರಾಜೇಗೌಡ ಅವರ ಮೊಬೈಲ್ ನೆಟ್ವರ್ಕ್ ಆಧರಿಸಿ ಅಂತಿಮವಾಗಿ ಅವರನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ಸಮೀಪ ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular