ಭೀಕರ ಅಪಘಾತ: ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ದುರ್ಮರಣ

ಬೆಳಗಾವಿ: ಕ್ರೋಸರ್ ವಾಹನ ಪಲ್ಟಿಯಾಗಿ ಬಿದ್ದು ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಾಂಗೋಲಾ-ಜತ್ತ ಮಾರ್ಗದಲ್ಲಿ ನಡೆದಿದೆ.

ಮೃತ ಮಹಿಳೆಯರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ನಿವಾಸಿಗಳು. ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತ ದುರ್ದೈವಿಗಳು.

ಅಥಣಿ ತಾಲೂಕಿನಿಂದ ಮಹಾರಾಷ್ಟ್ರಕ್ಕೆ ಕೂಲಿ ಕೆಲಸಕ್ಕಾಗಿ ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಕ್ರೂಸರ್ ವಾಹನದ ಎಡಗಡೆಯ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read