BIG BREAKING: ವಿಧಾನ ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜೊತೆ ಮೈತ್ರಿ; ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ 11-05-2024 8:44PM IST / No Comments / Posted In: Karnataka, Latest News, Live News ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದ ಬಳಿಕವೂ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸಲು ತೀರ್ಮಾನಿಸಿದೆ. ಆದರೆ ಆರು ವಿಧಾನ ಪರಿಷತ್ ಕ್ಷೇತ್ರಗಳ ಪೈಕಿ 2 ಸ್ಥಾನ ಕೇಳಿದ್ದ ಜೆಡಿಎಸ್ ಗೆ ಕೇವಲ ಒಂದು ಕ್ಷೇತ್ರದಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಹತ್ವದ ಸಭೆ ನಡೆಸಿದ ಬಿಜೆಪಿ ಈ ತೀರ್ಮಾನ ಕೈಗೊಂಡಿದ್ದು, ಈಶಾನ್ಯ ಪದವೀಧರ ಕ್ಷೇತ್ರದಿಂದ ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ್, ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ, ಆಗ್ನೇಯ ಪದವೀಧರ ಕ್ಷೇತ್ರದಿಂದ ವೈ.ಎ. ನಾರಾಯಣಸ್ವಾಮಿ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಎಂ. ದೇವೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ. ನಿಂಗರಾಜು ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಈ ಪಟ್ಟಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಸಹ ಅನುಮೋದನೆ ನೀಡಿದ್ದಾರೆ. ಆರು ಸ್ಥಾನಗಳ ಪೈಕಿ ಜೆಡಿಎಸ್ ಎರಡು ಸ್ಥಾನಗಳನ್ನು ಕೇಳಿದ್ದು, ನೈರುತ್ಯ ಶಿಕ್ಷಕರ ಕ್ಷೇತ್ರವನ್ನು ಮಾತ್ರ ಮೈತ್ರಿ ಪಕ್ಷ ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ. ಬಿಜೆಪಿಯ ಈ ತೀರ್ಮಾನಕ್ಕೆ ಜೆಡಿಎಸ್ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಜೆಡಿಎಸ್ ಹಾಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ತಾವು ಕಣಕ್ಕಿಳಿಯುವುದಾಗಿ ಈಗಾಗಲೇ ಘೋಷಿಸಿದ್ದು, ಈ ಸ್ಥಾನವನ್ನು ಬಿಜೆಪಿ, ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.