HomeKarnatakaBIG NEWS: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಸಲು SIT ಸಿದ್ಧತೆ

BIG NEWS: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಸಲು SIT ಸಿದ್ಧತೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಒಂದು ವಾರದಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಮಾರ್ಚ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಫಯಾಜ್ ಎಂಬಾತ ವಿದ್ಯಾರ್ಥಿನಿ ನೇಹಾಳನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ.

ಪ್ರೀತಿ ನಿರಾಕರಿಸಿದ್ದಕ್ಕೆ ನೇಹಾಳನ್ನು ಹತ್ಯೆ ಮಾಡಿದ್ದ. ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲಾಗಿತ್ತು. 6 ದಿನಗಳ ಕಾಲ ಆರೋಪಿ ಫಯಾಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಫಯಾಜ್ ತಂದೆ-ತಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದ ಎಸ್ಐಟಿ ಇದೀಗ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ನಡೆಸಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular