alex Certify ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಆಯ್ಕೆ; 6 ಕ್ಷೇತ್ರಗಳಿಗೂ ಕೈ ಅಭ್ಯರ್ಥಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಆಯ್ಕೆ; 6 ಕ್ಷೇತ್ರಗಳಿಗೂ ಕೈ ಅಭ್ಯರ್ಥಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ವಿಧಾನ ಪರಿಷತ್ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ 6 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಿದೆ.

ಈ ಹಿಂದೆ ಕಾಂಗ್ರೆಸ್ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿತ್ತು. ಆದರೆ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿ ಆಯ್ಕೆ ಮಾಡಿರಲಿಲ್ಲ. ಇದೀಗ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ಮೂಲಕ ವಿಧಾನ ಪರಿಷತ್ 6 ಕ್ಷೇತ್ರಗಳಿಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

 

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ:
ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ.ಮಂಜುನಾಥ್
ದಕ್ಷಿಣ ಶಿಕ್ಷಕರ ಕ್ಷೇತ್ರ – ಮರಿತಿಬ್ಬೇಗೌಡ
ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್
ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ್ ಪಾಟೀಲ್
ನೈಋತ್ಯ ಪದವೀಧರರ ಕ್ಷೇತ್ರ -ಆಯನೂರು ಮಂಜುನಾಥ್
ಬೆಂಗಳೂರು ಪದವೀಧರರ ಕ್ಷೇತ್ರ – ರಾಮೋಜಿ ಗೌಡ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...