HomeKarnatakaವಿದ್ಯಾರ್ಥಿಗಳೇ ಗಮನಿಸಿ: ಸ್ನಾತಕ ಪದವಿ ಪ್ರವೇಶ ಪರೀಕ್ಷೆ ಮುಂದೂಡಿಕೆ

ವಿದ್ಯಾರ್ಥಿಗಳೇ ಗಮನಿಸಿ: ಸ್ನಾತಕ ಪದವಿ ಪ್ರವೇಶ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿ ವಿವಿಧ ಸ್ನಾತಕ ಪದವಿಗಳ ಪ್ರವೇಶಕ್ಕೆ ಮೇ 14ರಂದು ನಿಗದಿಯಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ.

2024 -25ನೇ ಸಾಲಿನ ಪ್ರಥಮ ವರ್ಷದ ಸ್ನಾತಕ ಪದವಿಗಳಿಗೆ ಬೆಂಗಳೂರು, ಧಾರವಾಡ ಕೃಷಿ ವಿವಿ, ರಾಯಚೂರು ಮತ್ತು ಬಾಗಲಕೋಟೆ ತೋಟಗಾರಿಕೆ ಜ್ಞಾನಗಳ ವಿವಿ, ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ, ಬೀದರ್ ನ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿವಿಯಲ್ಲಿ ವಿವಿಧ ಸ್ನಾತಕ ಪದವಿಗಳಿಗೆ ಮೇ 17 ರಂದು ಸಂಜೆ 4 ಗಂಟೆಯೊಳಗೆ ಸೂಕ್ತ ದಾಖಲೆಗಳನ್ನು ಖುದ್ದಾಗಿ ಸಂಬಂಧಿಸಿದ ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಲ್ಲಿಯೇ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಮುಂದೂಡಿದ ಸ್ನಾತಕ ಪದವಿಯ ಪ್ರಾಯೋಗಿಕ ಪರೀಕ್ಷೆಗಳ ಬಗ್ಗೆ ಮತ್ತು ದಾಖಲಾತಿ ಸಲ್ಲಿಕೆಯ ಬಗ್ಗೆ ಕರ್ನಾಟಕ ರಾಜ್ಯದ ಎಲ್ಲಾ ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಗಳಲ್ಲಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular