ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
5 ಲಕ್ಷ ರೂಪಾಯಿ ಮೌಲ್ಯದ ಬಾಂಡ್ ನೀಡಬೇಕು. ಇಬ್ಬರ ಶ್ಯೂರಿಟಿ ನೀಡಬೇಕು. ಸಾಕ್ಷಗಳನ್ನು ನಾಶ ಮಾಡಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಲಾಗಿದೆ.
ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ನಾಳೆ ಜೈಲಿನಿಂದ ರೇವಣ್ಣ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯಿಂದ ರೇವಣ್ಣ ಅವರಿಗೆ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.