ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರ ಸರ್ಕಾರಿ ನಿವಾಸದಲ್ಲಿ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ತಂಡದ ಅಧಿಕಾರಿಗಳು ಸೋಮವಾರ ಹಾಸನ ಮತ್ತು ಹೊಳೆನರಸೀಪುರದಲ್ಲಿ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಹಾಸನ ಸಂಸದರ ಸರ್ಕಾರಿ ನಿವಾಸದಲ್ಲಿ ನನ್ನ ಮೇಲೆ ಅತ್ಯಾಚಾರ ನಡೆದಿತ್ತು ಎಂದು ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಅವರೊಂದಿಗೆ ಮೇ 4ರಂದು ಎಸ್ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿ ಸಂಸದರ ನಿವಾಸವನ್ನು ವಶಕ್ಕೆ ಪಡೆದಿದ್ದರು.
ಸೋಮವಾರ ಎಫ್ಎಸ್ಎಲ್ ತಂಡದ ಅಧಿಕಾರಿಗಳು ಸಂಸದರ ಸರ್ಕಾರಿ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದು ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಇನ್ಸ್ಪೆಕ್ಟರ್ ಸ್ವರ್ಣಾ ನೇತೃತ್ವದಲ್ಲಿ ಹೊಳೆನರಸೀಪುರದಲ್ಲಿ ಶಾಸಕ ಹೆಚ್.ಡಿ. ರೇವಣ್ಣ ಅವರ ನಿವಾಸದಲ್ಲಿಯೂ ಪರಿಶೀಲನೆ ನಡೆಸಲಾಗಿದೆ.