HomeKarnatakaಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ: ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ರಕ್ಷಿಸಿದ ಚಾಲಕ

ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ: ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ರಕ್ಷಿಸಿದ ಚಾಲಕ

ಚಿಕ್ಕಮಗಳೂರು: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿದ್ದು ಚಾಲಕ ಸಮಯ ಪ್ರಜ್ಞೆಯಿಂದ ಪ್ರಯಾಣಿಕರನ್ನು ರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಸಮೀಪ ನಡೆದಿದೆ.

ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಬಸ್ ಅನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ ಎಲ್ಲಾ 39 ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿದ್ದಾರೆ. ಸೋಮವಾರ ಮಧ್ಯರಾತ್ರಿ 1.30 ರ ಸುಮಾರಿಗೆ ಘಟನೆ ನಡೆದಿದೆ. ತರೀಕೆರೆ ಸಮೀಪದ ಅಜ್ಜಂಪುರ ಕ್ರಾಸ್ ಬಳಿ ತೆರಳುತ್ತಿದ್ದ ಬಸ್ ಹಿಂಭಾಗದ ಇಂಜಿನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡು ಅಪಾಯದ ಎಚ್ಚರಿಕೆ ಗಂಟೆ ಬಾರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದನ್ನು ಗಮನಿಸಿದ ಚಾಲಕ ಸುಬ್ರಹ್ಮಣ್ಯ ಕೂಡಲೇ ರಸ್ತೆ ಬದಿಗೆ ಬಸ್ ನಿಲ್ಲಿಸಿದ್ದು, ನಿದ್ದೆಯಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular