
ನಿನ್ನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಲಕ್ನೋ ಎದುರು 19 ರನ್ ಗಳಿಂದ ಭರ್ಜರಿ ಜಯಸಾಧಿಸಿದ್ದು, ಈ ಮೂಲಕ ಮೂರು ತಂಡಗಳ ಪ್ಲೇ ಆಫ್ ಕನಸನ್ನು ಇನ್ನೂ ಜೀವಂತವಾಗಿಸಿದೆ. ಡೆಲ್ಲಿ ತಂಡದ ಗೆಲುವು ಆರ್ಸಿಬಿ ತಂಡಕ್ಕೆ ಬಹಳಷ್ಟು ಸಹಕಾರಿಯಾಗಿದೆ.
ಇಂದು ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದ್ದು, ಪ್ಲೇ ಆಫ್ ನಿಂದ ಹೊರ ಬಿದ್ದಿರುವ ಪಂಜಾಬ್ ಕಿಂಗ್ಸ್ ತನ್ನ ಪ್ರತಿಷ್ಠೆಗಾಗಿ ಈ ಪಂದ್ಯವನ್ನು ಗೆಲ್ಲಲು ನೋಡುತ್ತಿದ್ದರೆ, ಈಗಾಗಲೇ ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿರುವ ರಾಜಸ್ಥಾನ್ ರಾಯಲ್ಸ್ ಮೊದಲನೇ ಸ್ಥಾನಕ್ಕೇರುವ ಉತ್ಸಾಹದಲ್ಲಿದೆ.
ಎರಡು ತಂಡಗಳು ಈಗಾಗಲೇ ಪ್ಲೇ ಆಫ್ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದು, ಉಳಿದ ಎರಡು ಸ್ಥಾನಗಳಿಗೆ ಮೂರು ತಂಡಗಳು ಭರ್ಜರಿ ಹೋರಾಟ ನಡೆಸುತ್ತಿವೆ.