HomeEntertainmentಮೇ 16ಕ್ಕೆ ಬಿಡುಗಡೆಯಾಗಲಿದೆ 'ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ' ಚಿತ್ರದ ಕ್ಯಾರೆಕ್ಟರ್ ಪೋಸ್ಟರ್

ಮೇ 16ಕ್ಕೆ ಬಿಡುಗಡೆಯಾಗಲಿದೆ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್

ಅಭಿಷೇಕ್ ಎಂ ಚೊಚ್ಚಲ ಬಾರಿ ಕಥೆ ಬರೆದು ನಿರ್ದೇಶಸಿರುವ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್ ಇದೇ ಮೇ 16 ರಂದು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ನಟಿ ಬೃಂದಾ ಆಚಾರ್ಯ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಾಮಿಡಿ ಡ್ರಾಮಾ ಕಥಾ ಹಂದರ ಹೊಂದಿರುವ ಚಿತ್ರವನ್ನು ಶ್ರೀದೇವಿ ಎಂಟರ್ಟೈನರ್ ಬ್ಯಾನರ್ ನಲ್ಲಿ ಎಚ್ ಕೆ ಪ್ರಕಾಶ್ ನಿರ್ಮಾಣ ಮಾಡಿದ್ದು, ದೀಕ್ಷಿತ್ ಶೆಟ್ಟಿ ಮತ್ತು ಬೃಂದಾಚಾರ್ಯ ಪ್ರಮುಖ ಪಾತ್ರದಲ್ಲಿದ್ದಾರೆ. ಇನ್ನುಳಿದಂತೆ ಶ್ರೇಯಸ್ ಶರ್ಮಾ, ವಿನುತಾ, ಶ್ರೀವಾತ್ಸ, ಅಶ್ವಿನ್ ರಾವ್ ಉಳಿದ ಪಾತ್ರವರ್ಗದಲ್ಲಿದ್ದಾರೆ. ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಸಿನಿಮಾ ಸುಮಾರು ನಾಲ್ಕು ಭಾಷೆಗಳಲ್ಲಿ ತೆರೆ ಕಾಣಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular