HomeCrimeBIG NEWS: 5ನೇ ಮಹಡಿಯಿಂದ ಬಿದ್ದು ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

BIG NEWS: 5ನೇ ಮಹಡಿಯಿಂದ ಬಿದ್ದು ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಐದನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಆಂಧ್ರಪ್ರದೇಶ ಮೂಲದ 21 ವರ್ಷದ ರಾಹುಲ್ ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಈತ ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.

ಈತ ನಿನ್ನೆ ನಡೆದ ಪರೀಕ್ಷೆಗೆ ತಡವಾಗಿ ಬಂದಿದ್ದ ಎನ್ನಲಾಗಿದ್ದು, ಹೀಗಾಗಿ ಉಪನ್ಯಾಸಕರು ನಿಂದಿಸಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular