BREAKING NEWS: ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟ ಬಿಜೆಪಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸಿದ್ದು, ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಹಾಗೂ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿವೆ.

ಈ ಮೊದಲು 5 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ ಜೆಡಿಎಸ್ ಗೆ ಒಂದು ಕ್ಷೇತ್ರ ಬಿಟ್ಟು ಕೊಟ್ಟಿತ್ತು. ಆದರೆ ಜೆಡಿಎಸ್ ಎರಡು ಕ್ಷೇತ್ರಗಳನ್ನು ಕೇಳಿದ್ದು ಇದಕ್ಕೆ ಹೈಕಮಾಂಡ್ ಕೂಡ ಒಪ್ಪಿಗೆ ಸೂಚಿಸಿದ್ದು, ಇದೀಗ ತನ್ನ ಅಭ್ಯರ್ಥಿ ನಿಂಗರಾಜು ಅವರ ಹೆಸರನ್ನು ಹಿಂಪಡೆದುಕೊಂಡಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ನ ವಿವೇಕಾನಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದ್ದು, ಇನ್ನು ಹಾಲಿ ವಿಧಾನ ಪರಿಷತ್ ಸದಸ್ಯ ಜೆಡಿಎಸ್ ನ ಭೋಜೇಗೌಡ ಮತ್ತೊಮ್ಮೆ ಕಣಕ್ಕಿಳಿಯಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read