ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ರಾಂಚಿಯಲ್ಲಿ ವಿಚಾರಣೆ ನಡೆಸಿದ ನಂತರ ಬಂಧಿಸಿದೆ.
ಸಚಿವರ ವೈಯಕ್ತಿಕ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಸಹಾಯಕನ ಮನೆಯಲ್ಲಿ ಭಾರೀ ಪ್ರಮಾಣದ ನಗದು ವಸೂಲಾತಿಗೆ ಸಂಬಂಧಿಸಿದಂತೆ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಫ್ಲ್ಯಾಟ್‌ನಿಂದ 34 ಕೋಟಿ ರೂ.ಗೂ ಹೆಚ್ಚು ನಗದು ವಶಪಡಿಸಿಕೊಂಡ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಅವರನ್ನು ಬಂಧಿಸಿದೆ.
ED arrests Jharkhand Minister and Congress leader Alamgir Alam in connection with a huge cash recovery from the household help of his PS Sanjeev Lal. pic.twitter.com/0GxcZkrmc1
— ANI (@ANI) May 15, 2024

