ಬೆಂಗಳೂರು: 2023- 24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ -1ಗೆ ನೋಂದಾಯಿಸಿದ್ದರೂ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ 26 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಜೂನ್ 7ರಿಂದ 14ರ ವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆ -2ರಲ್ಲಿ ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ.
ಶಾಲೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಕಡ್ಡಾಯವಾಗಿ ಪಡೆಯಬೇಕಾದ ಶೇಕಡ 75ರಷ್ಟು ಹಾಜರಾತಿ ಇಲ್ಲದ ಸುಮಾರು 26,692 ವಿದ್ಯಾರ್ಥಿಗಳು ಕಳೆದ ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಪರೀಕ್ಷೆ -1ಕ್ಕೆ ನೋಂದಾಯಿಸಿಕೊಂಡಿದ್ದರೂ ಅವಕಾಶ ದೊರೆಯದ ಹಿನ್ನೆಲೆಯಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಖಾಸಗಿ ವಿದ್ಯಾರ್ಥಿಗಳಾಗಿ ಪರೀಕ್ಷೆ -2 ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ https://kseab.karnataka.gov.in ವೆಬ್ಸೈಟ್ ನಲ್ಲಿ ಮುಖ್ಯ ಶಿಕ್ಷಕರ ಲಾಗಿನ್ ರಿಜಿಸ್ಟ್ರೇಷನ್ ಫಾರ್ ಎಸ್.ಎಸ್.ಎಲ್.ಸಿ. -2024 ಎಕ್ಸಾಮ್ -2 ಲಿಂಕ್ ಮೂಲಕ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.