HomeKarnatakaನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ

ಮೈಸೂರಿನಲ್ಲಿ ಗುರುವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ, ಹೆಸರಾಂತ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಅವರು ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಆಯುಕ್ತರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಜರಿದ್ದರು.

ಇದಕ್ಕೂ ಮುನ್ನ ತಾಯಿ ರೇಣುಕಮ್ಮ, ಪತ್ನಿ ಸಮಿತಾ ಸರ್ಜಿ ಅವರೊಂದಿಗೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ್ರು, ಬಿಜೆಪಿ ಹಿರಿಯ ಮುಖಂಡರಾದ ಎನ್.ಜೆ.ರಾಜಶೇಖರ್ ( ಸುಭಾಷ್) ಸೇರಿದಂತೆ ಕುಟುಂಬದ ಸದಸ್ಯರು, ಬಂಧುಗಳು, ಹಿತೈಷಿಗಳು ಭಾಗಿಯಾಗಿದ್ದರು.

ಅಲ್ಲದೇ ‌ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ (ಚನ್ನಗಿರಿ, ನ್ಯಾಮತಿ, ಹೊನ್ನಾಳಿ) ಜಿಲ್ಲೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular