HomeKarnatakaಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯ ಸರ್ಕಾರವು ಸ್ಥಾಪಿಸಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ ವಸತಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ ಮೇ 14 ರಿಂದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಬಿ & ಪಿ.ಸಿ.ಎಂ.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಲಾಗಿದೆ.

ಪ್ರವೇಶಕ್ಕೆ ಎಲ್ಲಾ ಮೊರಾರ್ಜಿ ಶಾಲಾ ಮತ್ತು ಕಾಲೇಜುಗಳಲ್ಲಿ ಖುದ್ದಾಗಿ ಅರ್ಜಿ ಪಡೆದು ತಮ್ಮ ಮೂಲ ದಾಖಲಾತಿಗಳೊಂದಿಗೆ ಮೇ 20 ರೊಳಗಾಗಿ ಎಲ್ಲಾ ಮೊರಾರ್ಜಿ ಶಾಲಾ ಮತ್ತು ಕಾಲೇಜುಗಳಲ್ಲಿ ಸಲ್ಲಿಸಬೇಕು.

ಎಸ್.ಎಸ್.ಎಲ್.ಸಿ ಅಂಕಗಳ ಮತ್ತು ಮೀಸಲಾತಿ ಆಧಾರದ ಮೇಲೆ ತಲಾ 40 ವಿದ್ಯಾರ್ಥಿಗಳನ್ನು ಮೆರಿಟ್ ಮೇಲೆ ಆಯ್ಕೆ ಮಾಡಲಾಗುವುದು ಮತ್ತು ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ, ಹಾಗೂ ಇನ್ನಿತರೆ ಮೂಲಭೂತ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುವುದು. ಯಾವುದೇ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ತರಗತಿ ದಾಖಲಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಸಮೀಪದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜುಗಳನ್ನು ಸಂಪರ್ಕಿಸಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular