HomeKarnatakaವಿಕಲಚೇತನ ಮಕ್ಕಳಿಗೆ 6 ನೇ ತರಗತಿ ಪ್ರವೇಶಕ್ಕೆ ಅವಕಾಶ; ಇಲ್ಲಿದೆ ಹೆಚ್ಚಿನ ಮಾಹಿತಿ

ವಿಕಲಚೇತನ ಮಕ್ಕಳಿಗೆ 6 ನೇ ತರಗತಿ ಪ್ರವೇಶಕ್ಕೆ ಅವಕಾಶ; ಇಲ್ಲಿದೆ ಹೆಚ್ಚಿನ ಮಾಹಿತಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಅರ್ ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ, ಏಕಲವ್ಯ ಮಾದರಿ ವಸತಿ ಶಾಲೆ, ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ ಶೇ.25ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಹೆಚ್.ಐ.ವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳಿಗೆ ಶೇ.10 ಮೀಸಲಾತಿಯನ್ನು ನಿಗಧಿಪಡಿಸಿ 6ನೇ ತರಗತಿ ಪ್ರವೇಶ ಪಡೆಯಬಹುದು.

ವಿಕಲಚೇತನ ಮಕ್ಕಳು ಮೇಲ್ಕಂಡ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶ ಪಡೆಯಲು ಶೇ.10ರಷ್ಟು ಮೀಸಲಾತಿಯನ್ನು ಕಲ್ಪಿಸಿರುವುದರಿಂದ ಇದರ ಸದುಪಯೋಗವನ್ನು ಪಡೆಯಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ: ಸಂಬಂಧಪಟ್ಟ ವಸತಿ ನಿಲಯಗಳ ಮೇಲ್ವಿಚಾರಕರನ್ನು ಸಂಪರ್ಕಿಸಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular