ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸುವಂತೆ ನೀಡಿರುವ ನಿರ್ದೇಶನವನ್ನು ವಾಪಸ್ ಪಡೆಯುವಂತೆ ಕರ್ನಾಟಕ ರಾಜ್ಯ ಮಾಧ್ಯಕ ಶಿಕ್ಷಕರ ಸಂಘ ಆಗ್ರಹಿಸಿದೆ.
2023 -24ನೇ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ -1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವಂತೆ ನೀಡಿದ ನಿರ್ದೇಶನ ಹಿಂಪಡೆಯುವಂತೆ ಒತ್ತಾಯಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ರಜೆ ಅವಧಿಯಲ್ಲಿ ವೈದ್ಯಕೀಯ ಚಿಕಿತ್ಸೆ, ಕುಟುಂಬ ಪ್ರವಾಸ, ಕುಟುಂಬದ ಪೂರ್ವ ನಿಯೋಜಿತ ಕಾರ್ಯಕ್ರಮಗಳಲ್ಲಿ ಶಿಕ್ಷಕರು ತೊಡಗಿಕೊಂಡಿದ್ದಾರೆ. ದಿಢೀರನೆ ವಿಶೇಷ ತರಗತಿ ನಡೆಸಲು ಕೂಡಲೇ ಶಾಲೆಗಳಿಗೆ ಹಾಜರಾಗುವಂತೆ ಶಿಕ್ಷಣ ಇಲಾಖೆ ಮಾಡಿರುವ ಆದೇಶದಿಂದ ಆಘಾತ ಉಂಟಾಗಿದೆ. ಪರೀಕ್ಷೆ, ಮೌಲ್ಯಮಾಪನ, ಚುನಾವಣಾ ಕಾರ್ಯ ಮುಗಿಸಿ ಈಗಷ್ಟೇ ರಜೆಗೆ ತೆರಳಿರುವ ಶಿಕ್ಷಕರು ಖಿನ್ನತೆಗೆ ಒಳಗಾಗಿದ್ದಾರೆ. ಹಾಗಾಗಿ ವಿಶೇಷ ತರಗತಿ ಸುತ್ತೋಲೆ ಆದೇಶ ವಾಪಸ್ ಪಡೆಯಬೇಕೆಂದು ಕೋರಲಾಗಿದೆ.