HomeKarnatakaಪರಿಷತ್ ಚುನಾವಣೆ ಗೆಲುವಿಗೆ ಬಿಜೆಪಿ ಕಾರ್ಯತಂತ್ರ: ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಪ್ರಭಾರಿಗಳ ನೇಮಕ

ಪರಿಷತ್ ಚುನಾವಣೆ ಗೆಲುವಿಗೆ ಬಿಜೆಪಿ ಕಾರ್ಯತಂತ್ರ: ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಪ್ರಭಾರಿಗಳ ನೇಮಕ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಪ್ರಭಾರಿಗಳು, ಸಹ ಪ್ರಭಾರಿಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇಮಕ ಮಾಡಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರಕ್ಕೆ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಪ್ರಭಾರಿಯಾಗಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಪ್ರಭಾರಿಯಾಗಿದ್ದು, ರಾಜ್ಯ ಕಾರ್ಯದರ್ಶಿ ಡಿ.ಎಸ್. ಅರುಣ್ ಸಹಪ್ರಭಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular